PM Yashasvi Scholarship: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರದ ಕಡೆಯಿಂದ ನೀಡುತ್ತಿರುವ ಪಿಎಂ ಯಶಸ್ವಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸುಮಾರು 75,000 ರಿಂದ ರೂ.1,25,000 ತನಕ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ, ಕೊನೆಯ ದಿನಾಂಕ ಮತ್ತು ಇನ್ನು ಹೆಚ್ಚಿನ ಮುಖ್ಯ ಮಾಹಿತಿಗಳನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಆದಕಾರಣ ಈ ಲೇಖನವನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿ.
ಸ್ನೇಹಿತರೇ ಇದೇ ರೀತಿ ಹೊಸ ಹೊಸ ಮಾಹಿತಿಗಳು , ಸರ್ಕಾರಿ ಜೋಜನೆಗಳು, ಸರ್ಕಾರಿ ಉದ್ಯೋಗಗಳು ಅಥವಾ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಕೆಲಸದ ವಿವರಗಳು ಮತ್ತು ಇನ್ನು ಹೆಚ್ಚು ಮಾಹಿತಿಗಳನ್ನು ತಿಳಿಯಲು ನಮ್ಮ ವೆಬ್ಸೈಟ್ ಗೆ ಬೇಟಿ ನೀಡಿ ಅಥವಾ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಗಳನ್ನು ಫಾಲೋ ಮಾಡಿ ಹಾಗೂ ದಿನನಿತ್ಯ ನಡೆಯುವ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಪಿಎಂ ಯಶಸ್ವಿ ಸ್ಕಾಲರ್ಶಿಪ್ ( PM Yashasvi Scholarship)
ಕೇಂದ್ರ ಸರ್ಕಾರದ ಕಡೆಯಿಂದ ಬಡ ಮತ್ತು ಇಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರೋತ್ಸಾಹಿಸಲು ಈ ಒಂದು ಪಿಎಂ ಯಶಸ್ವಿ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ. ಈ ಒಂದು ಸ್ಕಾಲರ್ಶಿಪ್ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸುಮಾರು 75000 ರಿಂದ 1, 25,000 ರೂ ವರೆಗೂ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ.
ಈ ಪಿಎಂ ಯಶಸ್ವಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಯಾವ ಯಾವ ವಿದ್ಯಾರ್ಥಿಗಳು ಅರ್ಹರು ಮತ್ತು ಈ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳ ವಿವರಗಳು, ಅರ್ಜಿಯನ್ನು ಸಲ್ಲಿಸುವ ಸಂಪೂರ್ಣ ವಿವರ ಮತ್ತು ಇನ್ನು ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿ.
ಪಿಎಂ ಯಶಸ್ವಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಯಾರು ಸಲ್ಲಿಸಬಹುದು ?
ಪಿಎಂ ಯಶಸ್ವಿ ಸ್ಕಾಲರ್ಶಿಪ್ ಗೆ ಕೇಂದ್ರ ಸರ್ಕಾರವು ನೀಡಿರುವ ಮಾಹಿತಿ ಪ್ರಕಾರ ಯಾವ ಒಂದು ವರ್ಗದ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಎಂಬುದರ ಇವರನ್ನು ಈ ಕೆಳಗೆ ನೀಡಿದ್ದೇವೆ.
- ಹಿಂದುಳಿದ ವರ್ಗದವರು
- ಪರಿಶಿಷ್ಟ ಜಾತಿ
- ಪರಿಶಿಷ್ಟ ಪಂಗಡ
- ಅಲೆಮಾರಿ ಕುಟುಂಬಗಳು
- ಬುಡಕಟ್ಟು ವಿದ್ಯಾರ್ಥಿಗಳು
- ಓಬಿಸಿ ವಿದ್ಯಾರ್ಥಿಗಳು
- ಹಾರ್ದಿಕ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳು
ಈ ಮೇಲೆ ನೀಡಲಾಗಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳು ಈ ಒಂದು ಪಿಎಂ ಯಶಸ್ವಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದಾಗಿದೆ. ಈ ಸ್ಕಾಲರ್ ಶಿಪ್ ಗೆ ಯಾವ ತರಗತಿಯ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಎಂಬುದರ ವಿವರವನ್ನು ಈ ಕೆಳಗೆ ನೀಡಿದ್ದೇವೆ.
ಯಶಸ್ವಿ ಸ್ಕಾಲರ್ಶಿಪ್ ಗೆ ಯಾವ ತರಗತಿಯ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ?
ಕೇಂದ್ರ ಸರ್ಕಾರವು ನೀಡಿರುವ ಮಾಹಿತಿಯ ಪ್ರಕಾರ 9ನೇ ತರಗತಿ ಮತ್ತು 11ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್‌ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಇಂದಿನ ತರಗತಿಯಲ್ಲಿ ಕನಿಷ್ಠ 60% ಫಲಿತಾಂಶವನ್ನು ಪಡೆದಿರಬೇಕಾಗಿದೆ.
ಅಂದರೆ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 8ನೇ ತರಗತಿಯಲ್ಲಿ ಕನಿಷ್ಠ 60 ಪರ್ಸೆಂಟ್ ಫಲಿತಾಂಶದಿಂದ ಪಾಸಾಗಿರಬೇಕು ಮತ್ತು 11ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 10ನೇ ತರಗತಿಯಲ್ಲಿ ನಿಷ್ಠ 60% ಪಲಿತಾಂಶದೊಂದಿಗೆ ಪಾಸಾಗಿರಬೇಕು. ಇಂತಹ ವಿದ್ಯಾರ್ಥಿಗಳು ಈ ಯಶಸ್ವಿ ಸ್ಕಾಲರ್ಶಿಪ್‌ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು ?
ಕೇಂದ್ರ ಸರ್ಕಾರ ನೀಡುತ್ತಿರುವ ಈ ಯಶಸ್ವಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಇರಬೇಕಾದ ದಾಖಲೆಗಳ ವಿವರವನ್ನು ಈ ಕೆಳಗೆ ಸಂಪೂರ್ಣವಾಗಿ ನೀಡಿದ್ದೇವೆ.
- ಎಂಟನೇ ತರಗತಿ ಅಥವಾ 10ನೇ ತರಗತಿಯ ಪ್ರಮಾಣ ಪತ್ರ
- ವಿದ್ಯಾರ್ಥಿ ಕುಟುಂಬದ ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
- ಆಧಾರ್ ಕಾರ್ಡ್
- ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಭಾವಚಿತ್ರ
ಈ ಮೇಲೆ ನೀಡಲಾಗಿರುವ ಎಲ್ಲಾ ದಾಖಲೆಗಳ ವಿವರವು ಈ ಯಶಸ್ವಿ ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಮುಖ್ಯವಾಗಿ ಬೇಕಾಗಿರುತ್ತದೆ. ಯಶಸ್ವಿ ಸ್ಕಾಲರ್ಷಿಪ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಿದ್ದೇವೆ.
ಯಶಸ್ವಿ ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಕೇಂದ್ರ ಸರ್ಕಾರ ನೀಡುತ್ತಿರುವ ಈ ಯಶಸ್ವಿ ಸ್ಕಾಲರ್ಷಿಪ್ ಗೆ ವಿದ್ಯಾರ್ಥಿಗಳು ಅರ್ಜಿಯನ್ನು ತಮ್ಮ ಹತ್ತಿರದ ಸೈಬರ್ ಸೆಂಟರ್ ಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ಮೊಬೈಲ್ ಮುಖಾಂತರ ಆನ್ಲೈನ್ ನಲ್ಲೂ ಕೂಡ ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ವಿವರವನ್ನು ಈ ಕೆಳಗೆ ನೀಡಿದ್ದೇವೆ.
- ಮೊದಲನೆಯದಾಗಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ನಾವು ನೀಡಿರುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ವೆಬ್ಸೈಟ್ನಲ್ಲಿ ತಮ್ಮ ವಿವರಗಳನ್ನು ಹಾಕಿ ರಿಜಿಸ್ಟರ್ ಮಾಡಿಕೊಳ್ಳಿ.
- ನಂತರ ಅಲ್ಲಿ ಕಾಣಿಸುವ ಯಶಸ್ವಿ ಸ್ಕಾಲರ್ಶಿಪ್ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅರ್ಜಿಯಲ್ಲಿ ಕೇಳಲಾಗಿರುವ ಸ್ಕ್ಯಾನ್ ಕಾಪಿಗಳನ್ನು ಅಪ್ಲೋಡ್ ಮಾಡಿ.
- ಕೊನೆಯಲ್ಲಿ ಸಬ್ಮಿಟ್ ನವ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಮೇಲೆ ನೀಡಿರುವ ಎಲ್ಲಾ ವಿಧಾನಗಳನ್ನು ಗಮನವಿಟ್ಟು ಪಾಲಿಸಿ ಈ ಯಶಸ್ವಿ ಸ್ಕಾಲರ್ಶಿಪ್ ಗೆ ನೀವು ನೇರವಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಿದ ವಿದ್ಯಾರ್ಥಿಗಳನ್ನು ಯಾವ ರೀತಿ ಆಯ್ಕೆಯನ್ನು ಮಾಡುತ್ತಾರೆ ಎಂಬುದರ ವಿವರವನ್ನು ಈ ಕೆಳಗೆ ನೀಡಿದ್ದೇವೆ.
ಯಶಸ್ವಿ ಸ್ಕಾಲರ್ ಶಿಪ್ ಗೆ ಆಯ್ಕೆಯಾಗುವ ವಿಧಾನ ?
ಕೇಂದ್ರ ಸರ್ಕಾರ ನೀಡಿರುವ ಈ ಯಶಸ್ವಿ ಸ್ಕಾಲರ್ಷಿಪ್ ಗೆ ಅರ್ಜಿಯನ್ನು ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ 100 ಅಂಕಗಳಿಗೆ ಸಂಬಂಧಿಸಿದಂತೆ ಒಂದು ಲಿಖಿತ ಪರೀಕ್ಷೆಯನ್ನು ನೀಡಲಾಗುತ್ತದೆ. ಈ ಒಂದು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಅಥವಾ ಒಳ್ಳೆಯ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳು ಪ್ರತಿ ತಿಂಗಳು 2500 ರಿಂದ 3,200 ರ ಹಣವನ್ನು ಪಡೆಯಬಹುದಾಗಿದೆ. ಅಂದರೆ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಆಯ್ಕೆಯಾದರೆ 2500 ರೂಗಳನ್ನು ಪಡೆಯಬಹುದಾಗಿದೆ ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಆಯ್ಕೆಯಾದರೆ 3200 ಹಣವನ್ನು ಪ್ರತಿ ತಿಂಗಳು ಪಡೆಯ ಬಹುದಾಗಿದೆ.
9ನೇ ತರಗತಿ ವಿದ್ಯಾರ್ಥಿಗಳಿಗೆ:- ₹75,000 ರೂಗಳ ತನಕ
11ನೇ ತರಗತಿ ವಿದ್ಯಾರ್ಥಿಗಳಿಗೆ:- ₹1,25,000 ರೂಗಳ ತನಕ
ಸ್ನೇಹಿತರೆ ನಮ್ಮ ಮಾಧ್ಯಮದಲ್ಲಿ ನಾವು ಯಾವುದೇ ತರಹದ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ಮತ್ತು ಇದೇ ರೀತಿ ಹೊಸ ಪ್ರಮುಖ ವಿಷಯಗಳ ಬಗ್ಗೆ ತಿಳಿಯಲು ನಮ್ಮ ವೆಬ್ಸೈಟ್ ಅನ್ನು ಫಾಲೋ ಮಾಡಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ನಮ್ಮ ವೆಬ್ಸೈಟ್ ಲಿಂಕ್ ಅನ್ನು ಶೇರ್ ಮಾಡಿ ಧನ್ಯವಾದಗಳು.